ರಾಜ್ಯ

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರು, ಮೂವರ ದುರ್ಮರಣ!

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ.

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರು, ಮೂವರ ದುರ್ಮರಣ!
ಅಪಘಾತಕ್ಕೀಡಾಗಿರುವ ಕಾರು
Published On :

ತುಮಕೂರು: ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ. 

ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಯಾವ ಕಂಪನಿಯ ಕಾರು ಎಂಬುದು ಪತ್ತೆ ಮಾಡಲು ಅಸಾಧ್ಯವಾಗಿದೆ. ತುಮಕೂರಿನ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. 

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಗೆ ಸಾಗಿರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿ ಚಾಲಕ ಸೇರಿ ಐದು ಮಂದಿ ಪ್ರಯಾಣಿಸುತ್ತಿದ್ದು ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಸಿಂಧನೂರಿನಲ್ಲಿ ಬೆಂಗಳೂರಿಗೆ ಬರುವ ವೇಳೆ ಕಳ್ಳಂಬೆಳ್ಳ ಬಳಿ ದೊಡ್ಡ ಆಲದಮರದ ಬಳಿ ಅಪಘಾತ ಸಂಭವಿಸಿದೆ. ಇನ್ನು ಕಳ್ಳಂಬೆಳ್ಳ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.