ರಾಜ್ಯ

ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ

ಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ
ಪ್ರಾತಿನಿಧಿಕ ಚಿತ್ರ
Published On :

ದಾವಣಗೆರೆ: ಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಸಂತ್ರಸ್ತೆ ಚಾಂದ್ ಸುಲ್ತಾನ(28) ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ ಹರಿತವಾದ ಆಯುಧದಿಂದ ಆಕೆಯ ಕತ್ತು ಸೀಳಿದ್ದಾನೆ. ಈ ವೇಳೆ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಿಂದ ಪರಾರಿಯಾಗಿದ್ದ ಸಾದತ್ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದಾಗ್ಯೂ, ಆತನೇ ಸ್ವತಃ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಸುಲ್ತಾನಾ ದಾವಣಗೆರೆಯ ವಿನೋಭಾ ನಗರದವರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಹೇಳಿದ್ದಾರೆ. ಹರಿಹರದ ನಿವಾಸಿಯಾಗಿದ್ದ ಅಯೂಬ್ ಎಂಬುವವರೊಂದಿಗೆ ಸುಲ್ತಾನಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಮದುವೆಯಾಗಬೇಕಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.