ಬೆಳಗಾವಿ: ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ
ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಬೆಳಗಾವಿ: ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.
ಆರು ತಿಂಗಳೊಳಗೆ ಈ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ಈ ಅಧಿವೇಶನದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡಿಸಿ, ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಂತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ಪರಿಷತ್ ನಲ್ಲಿ ಅಂಗೀಕಾರ ಪಡೆದ ನಂತರ, ಇದು SC/ST ಪಂಗಡದವರಿಗೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ನೇಮಕಾತಿಗಳಲ್ಲಿ ಹೆಚ್ಚಿನ ಮೀಸಲಾತಿಯನ್ನು ಒದಗಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


