ಮಳೆ ಸಂಬಂಧಿ ಅವಘಡಗಳಿಂದ ಜೀವಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ: ಆರ್ ಅಶೋಕ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಉತ್ತರ ಕನ್ನಡದ ಹಳಿಯಾಳದಲ್ಲಿ ಮನೆಗೋಡೆ ಕುಸಿದು ತಾಯಿ-ಮಗಳು ಸಾವು
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳು ಭೇಟಿ ನೀಡುತ್ತೇವೆ. ಮಳೆ ಹಾನಿ, ಭೂಕಂಪ, ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ನೆರೆ ಸಂತ್ರಸ್ತರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


