ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ
545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಇದೇ ವೇಳೆ ಅಮೃತ್ ಪೌಲ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಮುಂದೂಡಿದೆ.
ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ ಎಂದು ಸಿಐಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು.
ಪಿಎಸ್ಐ ನೇಮಕಾತಿ ಹಗರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಇಂದು ಕಾರ್ಲ್ಟನ್ ಹೌಸ್ನಲ್ಲಿರುವ ಸಿಐಡಿ ಕಚೇರಿಗೆ 1995 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪೌಲ್ ಅವರನ್ನು ಮೂರನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು. ಹಗರಣದಲ್ಲಿ ಪೌಲ್ ಸೇರಿದಂತೆ 79 ಜನರನ್ನು ಬಂಧಿಸಿರುವ ಸಿಐಡಿ ಇದುವರೆಗೆ ಎಂಟು ಎಫ್ಐಆರ್ಗಳನ್ನು ದಾಖಲಿಸಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಅವರು ನೇಮಕಾತಿ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಪರೀಕ್ಷೆಗಳು ನಡೆದಿದ್ದವು. ಹಗರಣ ಹೊರಬಿದ್ದ ಕೂಡಲೇ ಸರ್ಕಾರವು ಪೌಲ್ನನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾಯಿಸಿತ್ತು.
545 ಪಿಎಸ್ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್ಪಿ ಹಾಗೂ ಎಫ್ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


