ಭದ್ರಾ ಡ್ಯಾಂ ಬಳಿ ತಡೆಗೋಡೆ ಕುಸಿತ: ಸಂಚಾರ ಸ್ಥಗಿತಕ್ಕೆ ಆಗ್ರಹ
ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಬಳಿ ತಡೆಗೋಡೆಯ ಭಾಗವೊಂದು ಸೋಮವಾರ ಕುಸಿದಿದ್ದು, ಈ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕಳೆದ ಹಲವು ದಿನಗಳಿಂದ ನೀರು ಹೊರ ಬಿಡಲಾಗುತ್ತಿದೆ. ಜಲರಾಶಿ ಸೊಬಗು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಡ್ಯಾಂ ನೀರಿನ ರಭಸಕ್ಕೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ತಡೆಗೋಡೆ ಕುಸಿದು ಬಿದ್ದಿದೆ.
ದಿನದಿಂದ ದಿನಕ್ಕೆ ಭೂ ಕುಸಿತ ಹೆಚ್ಚಾಗುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಆದರೆ ಇಲ್ಲಿಯವರೆಗೂ ಸೂಕ್ತ ದುರಸ್ತಿ ಕಾಮಗಾರಿಯಾಗಲಿ, ಮುನ್ನೆಚ್ಚರಿಕೆ ಕ್ರಮವಾಗಲಿ ಕೈಗೊಂಡಿಲ್ಲ. ಪೊಲೀಸ್ ಇಲಾಖೆಯ ಬ್ಯಾರಿಕೇಡ್ ಕೂಡ ಕುಸಿದು ನದಿಗೆ ಬಿದ್ದಿದೆ ಎಂದು ಪ್ರವಾಸಿಗರು ದೂರಿದ್ದಾರೆ.
ಡ್ಯಾಂನಿಂದ ನೀರು ಹೊರಬಿಟ್ಟಿರುವ ಕಾರಣದಿಂದ ಭಾರೀ ಸಂಖ್ಯೆಯ ಪ್ರವಾಸಿಗರು ಡ್ಯಾಂ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ತಡೆಗೋಡೆ ಕುಸಿತವಾಗಿರುವ ಸ್ಥಳದ ಬಳಿಯೇ ಓಡಾಡುತ್ತಿದ್ದಾರೆ. ಕೊಂಚ ಹೆಚ್ಚಾ ಕಮ್ಮಿಯಾದರೂ ನಾಗರೀಕರು ನದಿಗೆ ಬೀಳುವ ಸಾಧ್ಯತೆಯಿದೆ. ತಕ್ಷಣವೇ ಭದ್ರಾ ಜಲಾಶಯ ಆಡಳಿತ ದುರಸ್ತಿ ಕಾರ್ಯ ನಡೆಸಬೇಕು. ಜೊತೆಗೆ ಸ್ಥಳದಲ್ಲಿ ಪ್ರವಾಸಿಗರ ಸಂಚಾರ ನಿರ್ಬಂಧಿಸಿ, ಸೂಕ್ತ ಬ್ಯಾರಿಕೇಡ್ ? ಮುನ್ನೆಚ್ಚರಿಕೆ ಫಲಕ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


