ಉಡುಪಿ: ಆ್ಯಂಬುಲೆನ್ಸ್ ಭೀಕರ ಅಪಘಾತದಲ್ಲಿ 4 ದುರ್ಮರಣ; ಎದೆನಡುಗಿಸೋ ವಿಡಿಯೋ!
ರೋಗಿಗಳ ಪ್ರಾಣ ಉಳಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ ಚಾಲಕರು ಶತಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ದುರ್ದೈವ ಸಂಗತಿಯೆಂದರೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಒಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು ನಾಲ್ವರು ದುರ್ಮರಣ ಹೊಂದಿದ್ದಾರೆ.

ಉಡುಪಿ: ರೋಗಿಗಳ ಪ್ರಾಣ ಉಳಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ ಚಾಲಕರು ಶತಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ದುರ್ದೈವ ಸಂಗತಿಯೆಂದರೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಒಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು ನಾಲ್ವರು ದುರ್ಮರಣ ಹೊಂದಿದ್ದಾರೆ.
ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಹೊನ್ನಾವರದಿಂದ ಕುಂದಾಪುರಕ್ಕೆ ಸಾಗಿಸಲಾಗುತ್ತಿತ್ತು. ಆದರೆ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯಿಂದ ಟೋಲ್ ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು ರೋಗಿ, ರೋಗಿಯ ಪತ್ನಿ ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ರೋಗಿ ಲೋಕೇಶ್ ಮಾಧವ ನಾಯ್ಕ್, ಪತ್ನಿ ಜ್ಯೋತಿ, ಸಂಬಂಧಿಗಳಾದ ಗಜಾನನ ನಾಯ್ಕ್ ಮತ್ತು ಮಂಜುನಾಥ್ ನಾಯ್ಕ್ ಮೃತ ದುರ್ದೈವಿಗಳು.
ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು
ಅಪಘಾತದಲ್ಲಿ ಟೋಲ್ ಸಿಬ್ಬಂದಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ದೃಶ್ಯ ಟೋಲ್ ಗೇಟ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


