ರಾಜ್ಯ

ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.

ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ಪೂರೈಕೆ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕ ವಿತರಿಸಲು ಸರಕಾರ ನಿರ್ಧರಿಸಿದೆ.

ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ'ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌' ಯೋಜನೆಯಡಿ  1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ  ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ.

 ರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ  ಅನುಷ್ಠಾನಗೊಳಿಸಲಾಗಿತ್ತು.

ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ 1-8ನೇ ತರಗತಿಯ ವಿದ್ಯಾರ್ಥಿಗಳಿಗೆ 100 ದಿನಗಳ ಕಾಲ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ  ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್ ಪ್ರಸ್ತಾವನೆ ಸಲ್ಲಿಸಿದ್ದರು.  ಆದರೆ ಸರ್ಕಾರ 46 ದಿನಗಳಿಗೆ ಅನುಮೋದನೆ ನೀಡಿದೆ.

ಈ ನಡುವೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ ನೀಡಿದ್ದು, ಯಾವುದೇ ವಿದ್ಯಾರ್ಥಿ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸುವುದಿಲ್ಲ, ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಆಯ್ಕೆ ಮಾಡಿಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.