ರಾಜ್ಯ

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ

ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಕಿಸ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜು ಅಧಿಕಾರಿಗಳು ಹಾಗೂ ಪೋಷಕರನ್ನು ಮುಜುಗರಕ್ಕೀಡು ಮಾಡಿದೆ.

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ
ಪೊಲೀಸ್ ಆಯುಕ್ತ ಶಶಿಕುಮಾರ್
Published On :

ಮಂಗಳೂರು: ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಕಿಸ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜು ಅಧಿಕಾರಿಗಳು ಹಾಗೂ ಪೋಷಕರನ್ನು ಮುಜುಗರಕ್ಕೀಡು ಮಾಡಿದೆ.

ಇಬ್ಬರು ವಿದ್ಯಾರ್ಥಿಗಳು ಕಾಲೇಜಿನ ಸಮವಸ್ತ್ರದಲ್ಲಿದ್ದು, ವಿದ್ಯಾರ್ಥಿಗಳು ಕಿಸ್ಸಿಂಗ್ ಸ್ಪರ್ಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಸಂಬಂಧ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದೆ ಎನ್ನಲಾಗ್ತಿದ್ದು, ಎಲ್ಲೆಡೆ ವೈರಲ್ ಆಗಿದೆ. ವಿದ್ಯಾರ್ಥಿಗಳ ನಡುವೆ ಕಿಸ್ಸಿಂಗ್ ಪಂದ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಇದರ ಪ್ರಕಾರ ಎಲ್ಲರೆದುರು ಕಿಸ್ ಮಾಡಬೇಕಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆರು ತಿಂಗಳ ಹಿಂದೆ ಖಾಸಗಿ ಫ್ಲಾಟ್‌ನಲ್ಲಿ ಈ ಘಟನೆ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಯೊಬ್ಬ ವಾರದ ಹಿಂದೆ ವಾಟ್ಸಾಪ್‌ನಲ್ಲಿ ವಿಡಿಯೋ ಹಾಕಿದ್ದು, ನಂತರ ವೈರಲ್ ಆಗಿತ್ತು. ಕಾಲೇಜು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಅಮಾನತು ಮಾಡಿದ್ದಾರೆ. ಕಾಲೇಜು ಅಧಿಕಾರಿಗಳಾಗಲಿ ಅಥವಾ ಪೋಷಕರಾಗಲಿ ಇದುವರೆಗೆ ಯಾವುದೇ ದೂರು ನೀಡಿಲ್ಲ ಎಂದು  ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.