ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ; 5 ಶಂಕಿತರ ಬಂಧನ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

ಮಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.
ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿವೆ. ಮರಣೋತ್ತರ ಪರೀಕ್ಷೆ ಕೈಗೊಂಡಿದ್ದು, ಕುಟುಂಬಸ್ಥರು ನೆಟ್ಟಾರುವಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.
ಹಂತಕರು ಕೇರಳ ನೋಂದಣಿ ಇರುವ ವಾಹನದಲ್ಲಿ ಬಂದು ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹಂತರ ಪತ್ತೆಗೆ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಐದು ತಂಡಗಳ ಪೈಕಿ ಮೂರು ತಂಡಗಳನ್ನು ಕ್ರಮವಾಗಿ ಕೇರಳ ಮತ್ತು ಮಡಿಕೇರಿ ಮತ್ತು ಕರ್ನಾಟಕದ ಹಾಸನಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾಯ್ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಶ್ರೀ ಪ್ರವೀಣ್ ನೆಟ್ಟಾರು ಅವರ ಮೇಲಿನ ಹತ್ಯೆ ನಿಜಕ್ಕೂ ಖೇದಕರ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಈ ದುಷ್ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಮುಲಾಜಿಲ್ಲದೆ ನಮ್ಮ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇನ್ನು ಪ್ರವೀಣ್ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರಿನತ್ತ ಕೊಂಡೊಯ್ಯಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


