ರಾಜ್ಯ

ಬೆಂಗಳೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ

ಬೆಂಗಳೂರಿನ ಹೋಟೆಲ್ ವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ
ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ.
Published On :

ಬೆಂಗಳೂರು: ಬೆಂಗಳೂರಿನ ಹೋಟೆಲ್ ವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ನಗರದ ಹಲಸೂರಿನ ಹೋಟೆಲ್ ವೊಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಕುರಿತು ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಪೊಲೀಸರು ದಾಳಿ ನಡೆಸಿದ್ದರು.

ಈ ವೇಳೆ ಡ್ರಗ್ಸ್ ಸೇವಿಸಿ ಮತ್ತಿನಲ್ಲಿದ್ದ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧನದ ಬಳಿಕ 6 ಮಂದಿಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ವರದಿಯಲ್ಲಿ ಸಿದ್ಧಾಂತ್ ಕಪೂರ್ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.