ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ತಮಿಳುನಾಡು ಬರೆದಿರುವ ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.
ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನೀರಿನ ಹಕ್ಕಿನ ಮೇಲೆ ಅವರು ದಬ್ಬಾಳಿಕೆ ಮಾಡುವ ಹುನ್ನಾರ ನಡೆಸಿದ್ದು, ಅವರ ಬೇಡಿಕೆಯನ್ನು ಕೇಂದ್ರ ಪರಿಗಣಿಸಬಾರದು. ನಮಗೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ಬಗ್ಗೆ ಕಾವೇರಿ ನದಿ ನಿರ್ವಹಣಾ ಮಂಡಳಿಯಲ್ಲಿ ಡಿಪಿಆರ್ ಅಪ್ರೂಪ್ ಮಾಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಅದೇ ರೀತಿ, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯಲ್ಲಿ ಹಲವಾರು ಸಭೆ ಆಗಿವೆ, ಸದ್ಯದಲ್ಲೇ ಅಂತಿಮ ಸಭೆ ನಡೆಯಲಿದೆ.
ಈ ನಡುವಲ್ಲೇ ತಮಿಳುನಾಡು ಕ್ಯಾತೆ ತೆಗೆದಿದೆ. ಪ್ರಧಾನಿಗೆ ಪತ್ರ ಬರೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಆ ಪತ್ರವನ್ನು ತರಿಸಿಕೊಳ್ಳುತ್ತೇನೆ. ಅವರ ಬೇಡಿಕೆ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಮತ್ತು ನಮ್ಮ ನೀರಿನ ಹಕ್ಕಿನ ಮೇಲೆ ಅವರು ದಬ್ಬಾಳಿಕೆ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ತಮಿಳುನಾಡಿನ ನೀರಿನ ಹಕ್ಕಿನ ಮೇಲೆ ನಾವು ಈ ಯೋಜನೆಯನ್ನ ಮಾಡಿಲ್ಲ. ನಮ್ಮ ಪಾಲಿನ ನೀರಿನ ಹಕ್ಕಿನ ಅಡಿ ನಾವು ಮೇಕೆದಾಟು ಮಾಡುತ್ತಿದ್ದೇವೆ, ನಮ್ಮ ರಾಜ್ಯದಲ್ಲಿಯೇ ಮಾಡುತ್ತಿದ್ದೇವೆ ಮತ್ತು ಈಗಾಗಲೇ ಸಾಕಷ್ಟು ಪ್ರಕ್ರಿಯೆ ಮುಗಿದು ಅಂತಿಮ ಹಂತಕ್ಕೆ ಬಂದಿದೆ. 15 ಸಭೆಗಳು ನಡೆದಿವೆ. ಇಲ್ಲಿಯವರೆಗೂ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ. ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಉಭಯ ಸದನಗಳ ಮೇಕೆದಾಟು ನಿರ್ಣಯಕ್ಕೆ ಸಂಪುಟ ಸಭೆ ಅನುಮೋದನೆ
ಕಾವೇರಿ ವಿಚಾರದಲ್ಲಿ ತಮಿಳುನಾಡಿನಲ್ಲಿ ಯಾವಾಗಲೂ ರಾಜಕೀಯ ಡ್ರಾಮಾ ನಡೆಯುತ್ತದೆ. ಅದರ ಮೇಲೆ ರಾಜಕೀಯ ಮಾಡುವುದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದು ಕೂಡ ಅದರ ಒಂದು ಭಾಗವೇ ಆಗಿದೆ. ಹಾಗಾಗಿ ಅವರ ಬೇಡಿಕೆ ಕಾನೂನು ಬಾಹಿರ, ಕೇಂದ್ರ ಇದನ್ನ ಪರಿಗಣಿಸಬಾರದು. ನಮಗೆ ವಿಶ್ವಾಸವಿದೆ ಈ ವಿಚಾರದಲ್ಲಿ ನಮಗೆ ನ್ಯಾಯ ಸಿಗಲಿದೆ. ಜೂನ್ 16 ರಂದು ಮೇಕೆದಾಟು ಯೋಜನೆ ಕುರಿತು ಸಭೆ ನಡೆಯಲಿದೆ, ಅದಕ್ಕೆ ನಮ್ಮ ಅಧಿಕಾರಿಗಳು ಹೋಗಲಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


