ರಾಜ್ಯ

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ

ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ
ಬಸವರಾಜ ಹೊರಟ್ಟಿ
Published On :

ಬೆಳಗಾವಿ: ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.

ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ. ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ವಿಧಾನಪರಿಷತ್ ನ 2 ಶಿಕ್ಷಕರು ಹಾಗೂ 2 ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಸಂಜೆಯೊಳಗೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.