ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಹತ್ಯೆ
ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ನರಸಿಂಹಮೂರ್ತಿ (50) ಕೊಲೆ ನಡೆದಿದ್ದು, ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜೊತೆ ಚಹಾ ಕುಡಿಯುತ್ತಿದ್ದಾಗ ಈ ದಾಳಿ ನಡೆಸಲಾಗಿದೆ.
ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು. ತಾಲ್ಲೂಕಿನ ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಕೊಲೆಗಳ ಸುದ್ದಿ ಹಸಿರಾಗಿರುವಂತೆಯೇ ಮತ್ತೊಂದು ಕೊಲೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

