ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 494 ಸೇರಿ 530 ಮಂದಿಗೆ ಪಾಸಿಟಿವ್; ಶೂನ್ಯ ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,61,361ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 530 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,61,361ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40,071 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 494 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,96,536ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 637 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,16,320ಕ್ಕೆ ಏರಿಕೆಯಾಗಿದೆ. ಇನ್ನು 5,928 ಸಕ್ರಿಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


