ನಾನು ಕರ್ನಾಟಕಕ್ಕೆ ಬರುತ್ತಿರುವೆ; ಬೆಂಗಳೂರು-ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವೆ; ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.
ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು’ ಎಂದಿದ್ದಾರೆ.
‘ಸೋಮವಾರ ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದೇನೆ. 150 ಟೆಕ್ ಹಬ್‌ಗಳ ಲೋಕಾರ್ಪಣೆ ಕೂಡ ಮಾಡುವೆ’ ಎಂದಿದ್ದಾರೆ.
ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರು. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


