ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.
ನಾಗರಭಾವಿಯ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಹೆಬ್ಬಾಳ ಬಳಿಯ ಮರಿಯಪ್ಪನಪಾಳ್ಯ, ಹೆಚ್ ಎಂಟಿ ಲೇಔಟ್ ನಲ್ಲಿ ಬಿಬಿಎಂಪಿಯಿಂದ ಟಾರ್ ಹಾಕಿದ ಒಂದೆರಡು ದಿನಗಳಲ್ಲಿಯೇ ಕಿತ್ತು ಬಂದಿತ್ತು. ಈ ಬಗ್ಗೆ ಮಾಧ್ಯಮಗಳ ಬಂದ ವರದಿ ಆಧರಿಸಿ ಬಿಬಿಎಂಸಿ ಮೂವರು ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿತ್ತು.
9 ಕಿಲೋ ಮೀಟರ್ ರಸ್ತೆ ಮಾಡಲು 11. 50 ಕೋಟಿ ರೂಪಾಯಿ ವೆಚ್ಚ ಮಾಡಿರುವುದಾಗಿ ಬಿಬಿಎಂಪಿ ಹೇಳಿದೆ. ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಕಡಗಳನ್ನು ಪರಿಶೀಲಿಸುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿರುವುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.
ಕಳಪೆ ಕಾಮಗಾರಿ ಸಂಬಂಧ ಮಾಧ್ಯಮಗಳಲ್ಲಿ ವರದಿ ಬಂದ ನಂತರ ಆರ್ ಆರ್ ನಗರ ಉಪ ವಿಭಾಗದ ಮುಖ್ಯ ಎಂಜಿನಿಯರ್ ಎಂಟಿ ಬಾಲಾಜಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹೆಚ್ ಜೆ ರವಿ ಮತ್ತು ಐಕೆ ವಿಶ್ವಾಸ ವಿರುದ್ಧ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರು ಷೋಕಾಸ್ ನೋಟಿಸ್ ಕಳುಹಿಸಿದ್ದಾರೆ.
ಇದೀಗ ಮತ್ತಷ್ಟು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಗುತ್ತಿಗೆದಾರ ರಮೇಶ್ ಗೆ ದಂಡವನ್ನು ಪಾಲಿಕೆ ವಿಧಿಸಿದೆ. ರಸ್ತೆ ಕಾಮಗಾರಿಯಿಂದಾಗಿ ನಮ್ಮ ವರ್ಚಸ್ಸಿಗೆ ಧಕ್ಕೆಯಾಗಿದೆ. ಆದಾಗ್ಯೂ, ಗುತ್ತಿಗೆದಾರನಿಗೆ ದಂಡ ವಿಧಿಸಲಾಗಿದೆ ಎಂಂದು ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶದ ನಂತರ ಬಿಬಿಎಂಪಿಯಿಂದ ಕಳಪೆ ಕಾಮಗಾರಿ ರಾಷ್ಟ್ರಮಟ್ಟದ ಸುದ್ದಿಯಾಗಿದ್ದು, ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


