ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ. ಬಿಡುಗಡೆ
ಕೊಪ್ಪಳದ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಮಂಗಳವಾರ ಹಣಕಾಸು ಇಲಾಖೆಗೆ...

ಬೆಂಗಳೂರು: ಕೊಪ್ಪಳದ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಮಂಗಳವಾರ ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅನುದಾನ ಒದಗಿಸಲು ಸೂಚಿಸಿದ್ದಾರೆ.
ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ. ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನವನ್ನು ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಕೊಪ್ಪಳ ಗವಿಮಠದ ಭಕ್ತರಿಂದ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


