ರಾಜ್ಯ

ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!
ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ
Published On :

ದಾವಣಗೆರೆ: ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. 

ದಾವಣಗೆರೆಯ ಕಡದಕಟ್ಟೆ ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಕಾರನ್ನು ಮೇಲೆತ್ತಿ ಪರಿಶೀಲಿಸಿದಾಗ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು. ಈ ಮೃತದೇಹ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರದ್ದೇ ಎಂದು ಹೇಳಲಾಗಿದೆ. 

Story image

ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

ಪೊಲೀಸ್ ಮೂಲಗಳ ಪ್ರಕಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ.

ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು. ಬಳಿಕ ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿತ್ತು. ಇದೀಗ ಕಾರು ಕಾಲುವೆಯಲ್ಲಿ ಬಿದ್ದಿದೆ. ಕಾರಿನಲ್ಲಿ ಚಂದ್ರಶೇಖರ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.