ರಾಜ್ಯ

2ನೇ ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಮೂರು ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

2ನೇ ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಮೂರು ದಿನ ಪೊಲೀಸ್ ಕಸ್ಟಡಿಗೆ
ಮುರುಘಾ ಶ್ರೀ
Published On :

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅವರನ್ನು ನವೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ, ಚಿತ್ರದುರ್ಗದ 2ನೇ ಹೆಚ್ಚುವರಿ  ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ನಂತರ ಅವರನ್ನು ವಿಚಾರಣೆಗಾಗಿ ಡಿವೈಸ್ಪಿ ಕಚೇರಿಗೆ ಪೊಲೀಸರು ಕರೆದೊಯ್ಯಲಾಯಿತು. 

ಮುರುಘಾ ಶ್ರೀಗಳ ವಿರುದ್ಧ ಅಕ್ಟೋಬರ್ 13 ರಂದು 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮುರುಘಾ ಶ್ರೀಗಳ ವಿಚಾರಣೆ ಬಳಿಕ ಇನ್ನುಳಿದ ಆರೋಪಿಗಳನ್ನು ಸಹ ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.