ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್- ಸಚಿವ ಸುಧಾಕರ್
ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು: ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ವಾಸವಿದ್ದ ಅನಾಥ ಬಾಣಂತಿ ಮಹಿಳೆಯನ್ನು ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ಆಟೋ ಮೂಲಕ ಕಳಿಸಿದ್ದರು. ಮಹಿಳೆಯೊಂದಿಗೆ ಪಕ್ಕದ ಮನೆಯ ವೃದ್ಧೆಯೊಬ್ಬರು ತೆರಳಿದ್ದರು.
ಆದರೆ ಜಿಲ್ಲಾಸ್ಪತ್ರೆಯಲ್ಲಿ ತಾಯಿ ಕಾರ್ಡ್ ಇಲ್ಲ ಎಂಬ ಕಾರಣ ನೀಡಿ, ಆಸ್ಪತ್ರೆಯಿಂದ ವಾಪಸ್ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರಿಂದ ಮಕ್ಕಳು ಹಾಗೂ ತಾಯಿ ಮೂವರೂ ಕೊನೆಯುಸಿರೆಳೆದಿದ್ದರು. ತಮ್ಮ ಬಳಿ ಹಣ ಇಲ್ಲದ ಕಾರಣ ಮಹಿಳೆ ಮನೆಗೆ ವಾಪಸ್ ಬಂದಿದ್ದರು. ಈ ಘಟನೆ ಬಳಿಕ ಬೆಳಗಿನ ಜಾವ ಮಹಿಳೆ ಅನಾರೋಗ್ಯದ ನಡುವೆ ಒಂದು ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ. ಬಳಿಕ, ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ 3 ಜೀವಗಳು ಬಲಿಯಾಗಿವೆ.
ಮೃತ ಮಹಿಳೆಯನ್ನು ಕಸ್ತೂರಿ ಎಂದು ಗುರುತಿಸಲಾಗಿದ್ದು, ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು ಎಂದು ಹೇಳಲಾಗುತ್ತಿದೆ. ಕಸ್ತೂರಿ ಆಸ್ಪತ್ರೆಗೆ ದಾಖಲಾಗಬೇಕಾದರೆ, ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೊಡುವಂತೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಸೂಚಿಸಿದ್ದರು. ಆದರೆ, ಅವರ ಬಳಿ ತಾಯಿ ಕಾರ್ಡ್ ಇರಲಿಲ್ಲ. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಕಸ್ತೂರಿ ತಮಿಳುನಾಡು ಮೂಲದವರಾಗಿದ್ದು, ಕಳೆದ ಒಂದು ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು. ಗರ್ಭಿಣಿ ಹಾಗೂ ಇಬ್ಬರು ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದರು.
ಘಟನಾ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಮಂಜುನಾಥ್ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯರು DHO ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡುವಂತೆಯೂ ಸ್ಥಳೀಯರು ಆಗ್ರಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


