ರಾಜ್ಯ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಹಾಡು ಬಳಕೆ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್!

ರಾಹುಲ್ ಗಾಂಧಿ ಸಾರಥ್ಯದಲ್ಲಿ ರಾಜ್ಯದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗೆ ಅನುಮತಿ ಇಲ್ಲದೆ ಕೆಜಿಎಫ್-2 ಚಿತ್ರದ ಹಾಡು ಬಳಸಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಹಾಡು ಬಳಕೆ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್!
ರಾಹುಲ್ ಜೋಡೋ ಯಾತ್ರೆ
Published On :

ಬೆಂಗಳೂರು: ರಾಹುಲ್ ಗಾಂಧಿ ಸಾರಥ್ಯದಲ್ಲಿ ರಾಜ್ಯದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗೆ ಅನುಮತಿ ಇಲ್ಲದೆ ಕೆಜಿಎಫ್-2 ಚಿತ್ರದ ಹಾಡು ಬಳಸಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.

ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್  ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. 

ಕೆಜಿಎಫ್-2 ರ ಸುಲ್ತಾನ್ ಹಾಡನ್ನು ಅನುಮತಿ ಇಲ್ಲದೆ ಬಳಸಿದ್ದಾರೆ ಎಂದು ಬೆಂಗಳೂರು ಮೂಲದ ಎಂಆರ್ ಟಿ ಮ್ಯೂಸಿಕ್ ಹಕ್ಕುಸ್ವಾಮ್ಯ ಉಲ್ಲಂಘನೆ ಮೊಕದ್ದಮೆ ದಾಖಲಿಸಿದ ನಂತರ ಕಾಂಗ್ರೆಸ್ ಪಕ್ಷದ ಖಾತೆಗಳನ್ನು ನಿರ್ಬಂಧಿಸುವಂತೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.