ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ನಿಶ್ಚಿತ: ತನ್ವೀರ್ ಸೇಠ್
ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದ್ದಾರೆ.

ಮೈಸೂರು: ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರು ಅಥವಾ ಶ್ರೀರಂಗಪಟ್ಟಿಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದ್ದಾರೆ.
ರಾಜೀವ್ ನಗರ ಅಲ್ ಬದರ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಮೆ ಸ್ಥಾಪನೆಗೆ ಮುನ್ನವೇ ಅದನ್ನು ಕೆಡವುವ ಮಾತು ಬಂದಿವೆ. ಪ್ರಮೋದ್ ಮುತಾಲಿಕ್ ಕಟ್ಟುವ ಕಾರ್ಯದಲ್ಲಿ ಯಾವತ್ತೂ ಇಲ್ಲ. ಬರೀ ಕೆಡವುವ ಕಾರ್ಯದಲ್ಲಿ ಅವರು ಮುಂದಿದ್ದಾರೆ. ಯಾರ ವಿರೋಧಕ್ಕೂ ನಾವು ಬಗ್ಗುವುದಿಲ್ಲ. ನಮ್ಮ ರಕ್ಷಣೆಗೆ ಸಂವಿಧಾನವಿದೆ ಎಂದು ಟಾಂಗ್ ನೀಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


