ರಾಜ್ಯ

ಸಿಎಂ ಬೊಮ್ಮಾಯಿ ಸೂಚನೆ ನಂತರ ನಂದಿನಿ ಹಾಲಿನ ದರ ಏರಿಕೆ ಆದೇಶ ಹಿಂಪಡೆದ ಕೆಎಂಎಫ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂದಿನ ಹಾಲು ಹಾಗೂ ಮೊಸರಿನ ದರ ಹೆಚ್ಚಳವನ್ನು ತಡೆದಿದ್ದು, ಸಿಎಂ ಸೂಚನೆ ನಂತರ ದರ ಏರಿಕೆ ಆದೇಶವನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ...

ಸಿಎಂ ಬೊಮ್ಮಾಯಿ ಸೂಚನೆ ನಂತರ ನಂದಿನಿ ಹಾಲಿನ ದರ ಏರಿಕೆ ಆದೇಶ ಹಿಂಪಡೆದ ಕೆಎಂಎಫ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂದಿನ ಹಾಲು ಹಾಗೂ ಮೊಸರಿನ ದರ ಹೆಚ್ಚಳವನ್ನು ತಡೆದಿದ್ದು, ಸಿಎಂ ಸೂಚನೆ ನಂತರ ದರ ಏರಿಕೆ ಆದೇಶವನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್) ಹಿಂಪಡೆದಿದೆ.

ಕೆಎಂಎಫ್ ನಾಳೆಯಿಂದಲೇ ಜಾರಿಗೆ ಬರುವಂತೆ ನಂದಿನ ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಹಾಲಿನ ದರ ಏರಿಕೆ ಬಗ್ಗೆ ನವೆಂಬರ್ 20 ರಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಅಲ್ಲದೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು.

ಕಲಬುರಗಿಯ ಸೇಡಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೈತರಿಗೆ ಅನುಕೂಲವಾಗುವಂತೆ ಹಾಗೂ ಜನರಿಗೆ ಹೊರೆಯಾಗದಂತೆ ಚರ್ಚಿಸಿ ನವೆಂಬರ್ 20ರ ಬಳಿಕ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಮಧ್ಯ ಪ್ರವೇಶದ ನಂತರ ಹಾಲು ಮತ್ತು ಮೊಸರಿನ ದರ ಏರಿಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.