ನವೋದ್ಯಮ ಪಾರ್ಕ್, 6 ತಿಂಗಳಲ್ಲಿ 6 ಹೈಟೆಕ್ ನಗರಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದು!
ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಮುಂದಿನ ಆರು ತಿಂಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಪ್ರಕಟಿಸಿದರು.

ಬೆಂಗಳೂರು: ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಮುಂದಿನ ಆರು ತಿಂಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಪ್ರಕಟಿಸಿದರು.
ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗ (ಬೆಂಗಳೂರು ಟೆಕ್ ಸಮ್ಮಿಟ್) ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಆರು ತಿಂಗಳೊಳಗೆ ನವೋದ್ಯಮ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೃಷಿ ಸಂಬಂಧಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳ ನವೋದ್ಯಮಗಳಿಗೂ ಈ ಪಾರ್ಕ್ ನಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಆಚೆಗೆ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸಮಾಡುತ್ತಿದೆ. ಇದಕ್ಕಾಗಿಯೇ ಆರು ಹೊಸ ನಗರಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಬೆಂಗಳೂರು ಸಮೀಪದ ಒಂದು ಸ್ಥಳವನ್ನು ಜ್ಞಾನ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಪರಿಸರ ಸ್ನೇಹಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಹೆಚ್ಷಿನ ಉತ್ತೇಜನ ನೀಡಬೇಕಿದೆ. ಪರಿಸರವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವ ಧ್ಯೇಯ ಎಲ್ಲ ಆವಿಷ್ಕಾರಗಳ ಹಿಂದೆ ಇರಬೇಕು ಎಂದರು.
ಇದೇ ವೇಳೆ ಹುಬ್ಬಳ್ಳಿ, ಧಾರವಾಡ, ಮೈಸೂರು, ಮಧ್ಯ ಕರ್ನಾಟಕ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆರು ತಿಂಗಳ ಅವಧಿಯಲ್ಲಿ ಆರು ಹೊಸ ಹೈಟೆಕ್ ನಗರಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.
ಈ ನಗರಗಳು ರಾಜ್ಯದ ಅಭಿವೃದ್ಧಿಗೆ ಜ್ಞಾನ, ತಂತ್ರಜ್ಞಾನ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುತ್ತವೆ. ಈ ನಿಟ್ಟಿನಲ್ಲಿ ನಾವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ, ಭೂಗೋಳವು ಕುಗ್ಗುತ್ತಿದೆ, ಸಂಪನ್ಮೂಲಗಳು ಕ್ಷೀಣಿಸುತ್ತಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯನ್ನು ಬಿಡುಗಡೆ ಮಾಡಿದರು.
ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಇಎಸ್‌ಡಿಎಂ ಪರಿಸರ ವ್ಯವಸ್ಥೆಯಲ್ಲಿ ವೈವಿಧ್ಯಮಯ ಉತ್ಪನ್ನದಲ್ಲಿ ಹೆಸರು ಮಾಡಿರುವ ಕಂಪನಿಗಳು ಸುಮಾರು 36,804 ಕೋಟಿ ಮೊತ್ತದ ಹೂಡಿಕೆಯೊಂದಿಗೆ ಕರ್ನಾಟಕದಲ್ಲಿ ತಮ್ಮ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಉತ್ಸುಕವಾಗಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


