ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ನ್ಯಾಯಾಂಗ ತನಿಖೆ ಇಲ್ಲ- ಸಿಎಂ ಬೊಮ್ಮಾಯಿ
ಮತದಾರರ ಪಟ್ಟಿ ಪರಿಷ್ಕರಣೆಯೆ ಲೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂಬ ಕಾಂಗ್ರೆಸ್ ಬೇಡಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ ತನಿಖೆಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯೆ ಲೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂಬ ಕಾಂಗ್ರೆಸ್ ಬೇಡಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ ತನಿಖೆಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇದು ಕ್ರಿಮಿನಲ್ ಪ್ರಕರಣ, ತ್ವರಿತವಾಗಿ ತನಿಖೆಯಾಗಬೇಕು. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನಿನ್ನೆ ಚಿಲುಮೆ ಸಂಸ್ಥೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿ ಕೆಲವರನ್ನು ಬಂಧಿಸಲಾಗಿದೆ. ತೀವ್ರ ಗತಿಯಲ್ಲಿ ತನಿಖೆ ನಡೆದಿದೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪ್ರತಿವರ್ಷ ಇಲ್ಲವೇ ಚುನಾವಣಾ ಸಂದರ್ಭದಲ್ಲಿ ನಡೆಯುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಕೇಳಿ ಬಂದಿರುವ ಆರೋಪಗಳು ಅಪರಾಧ ಪ್ರಕರಣಗಳಾಗಿದೆ. ಹಾಗಾಗಿ, ಪೊಲೀಸ್ ತನಿಖೆಯೇ ಸೂಕ್ತ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಡಿಎಗೆ ಸಂಬಂಧಿಸಿದಂತೆ ತನಿಖೆ ನಡೆದು, ಈ ಹಗರಣದಿಂದ ಪಾರಾಗಲು ನ್ಯಾಯಾಂಗ ತನಿಖೆ ನೆರವಾಯಿತು. ಇಂತಹ ಕಾಂಗ್ರೆಸ್ ಈಗ ನ್ಯಾಯಾಂಗದ ತನಿಖೆಗೆ ಬೇಡಿಕೆ ಇಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


