ಹಾಸನ: ಯೋಧರಿಬ್ಬರ ನಡುವಿನ ಜಮೀನು ವಿವಾದ ಕೊಲೆಯಲ್ಲಿ ಅಂತ್ಯ
ಬೇಲೂರು ತಾಲೂಕಿನ ತಿರುಮಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಇಬ್ಬರು ಯೋಧರ ಕುಟುಂಬಗಳ ನಡುವೆ ನಡೆದ ವಾಗ್ವಾದ ದುರಂತದಲ್ಲಿ ಅಂತ್ಯವಾಗಿದೆ

ಹಾಸನ: ಬೇಲೂರು ತಾಲೂಕಿನ ತಿರುಮಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಇಬ್ಬರು ಯೋಧರ ಕುಟುಂಬಗಳ ನಡುವೆ ನಡೆದ ವಾಗ್ವಾದ ದುರಂತದಲ್ಲಿ ಅಂತ್ಯವಾಗಿದೆ
ಇಲ್ಲಿನ ಬೇಲೂರು ತಾಲೂಕಿನ ತಿರುಮನಹಳ್ಳಿಯಲ್ಲಿ ಜಮೀನು ವಿಚಾರಕ್ಕೆ ನಡೆದ ಜಗಳವು ಕೊಲೆಯಲ್ಲಿಅಂತ್ಯವಾಗಿದೆ. ಯೋಧ ಯಶವಂತ್ ಎಂಬಾತ ಮೃತ ದುರ್ದೈವಿ.
ಯೋಧ ಚಂದನ್ ಮೇವು ಹಾಕುವ ಮೂಲಕ ವಾಕಿಂಗ್ ಪಾತ್ ಒತ್ತುವರಿ ಮಾಡಿಕೊಂಡಿದ್ದರು. ಅದನ್ನು ತೆರವುಗೊಳಿಸುವಂತೆ ಯಶವಂತ ಚಂದನ್ ಜೊತೆ ಜಗಳವಾಡಿದ್ದ ಎನ್ನಲಾಗಿದೆ. ಯೋಧರಿಬ್ಬರ ಕುಟುಂಬಗಳ ನಡುವೆ ಜಮೀನು ವಿಚಾರಕ್ಕೆ ಗಲಾಟೆ ಆಗಿದ್ದು, ಯೋಧ ಚಂದನ್ ಹಾಗೂ ಆತನ ಸಂಬಂಧಿಕರು, ಯಶವಂತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ವೇಳೆ ತೀವ್ರ ರಕ್ತಸ್ರಾವಗೊಂಡ ಯಶವಂತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಯೋಧ ಚಂದನ್ ಯಶವಂತ್ ಹಾಗೂ ಆತನ ಸಹೋದರ ಯತೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿದ್ದ ಯಶವಂತ್ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಯಶವಂತ್ ಸಹೋದರ, ಯೋಧ ಯತೀಶ್ ಕೂಡ ತೀವ್ರ ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಳೇಬೀಡು ಪೊಲೀಸರು ಚಂದನ್ನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


