ಮಂಗಳೂರು ಸ್ಫೋಟ ಪ್ರಕರಣ: ಸ್ಯಾಟ್ ಲೈಟ್ ಫೋನ್ ಬಳಕೆಯಾಗಿಲ್ಲ- ಎಸ್ ಪಿ ಸ್ಪಷ್ಟನೆ; ಕದ್ರಿ ದೇವಾಲಯಕ್ಕೆ ಬಿಗಿ ಭದ್ರತೆ
ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್‌ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ.

ಮಂಗಳೂರು: ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್‌ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ. ಕಾಡಿನ ಕಡೆಯಿಂದ ಕೇಳಿ ಬಂದಿರುವ ಸ್ಫೋಟದ ಸದ್ದು ಇಲ್ಲಿ ಮಾಮೂಲು. ಕಾಡಾನೆಗಳನ್ನು ಓಡಿಸಲು ಸಿಡಿಸಿರುವ ಸ್ಪೋಟಕಗಳದ್ದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದಿನ ದಿನ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ರಕ್ಷಿತಾರಣ್ಯದಲ್ಲಿ ಸಾಟಲೈಟ್ ಫೋನ್ ಬಳಕೆಯಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಅದೇ ದಿನ ರಾತ್ರಿ ಕಾಡಿನ ಭಾಗದಿಂದ ಸ್ಫೋಟದ ಸದ್ದು ಕೇಳಿಬಂದಿದೆ ಎಂಬ ವಿಚಾರ ಕೇವಲ ವದಂತಿ ಎಂದು ಎಸ್ ಪಿ. ಋುಷಿಕೇಶ್ ಸೋನಾವಣೆ ಸ್ಪಷ್ಟ ಪಡಿಸಿದ್ದಾರೆ.
ಬೆಂದ್ರಾಳ ಪ್ರಾಂತ್ಯಕ್ಕೆ ಶುಕ್ರವಾರವೇ ಭೇಟಿ ನೀಡಿ ಕೆಲವು ಮಾಹಿತಿಗಳನ್ನು ಸಂಗ್ರಹಿಸಿತ್ತು. ಅದೇ ತಂಡ, ಈಗ ಆ ಪ್ರಾಂತ್ಯದಲ್ಲಿ ಮತ್ತಷ್ಟು ತಪಾಸಣೆಗೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ. ಅದರಂತೆ ಧರ್ಮಸ್ಥಳ ಪೊಲೀಸರು ಸುಮಾರು 5 ಕಿ.ಮೀ. ರಕ್ಷಿತಾರಣ್ಯದೊಳಗೆ ಪರಿಶೀಲನೆ ನಡೆಸಿದ್ದು ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದೂ ಹೇಳಲಾಗಿದೆ.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಅವರ ಅಧ್ಯಕ್ಷತೆಯಲ್ಲಿ ಕದ್ರಿ ಮಂಜುನಾಥ ದೇವಸ್ಥಾನದ ಅಧಿಕಾರಿಗಳು ಮತ್ತು ಪೊಲೀಸರೊಂದಿಗೆ ಸಭೆ ನಡೆದಿದ್ದು, ಸಿಂಗಲ್ ಎಂಟ್ರಿ, ಸ್ಕ್ರೀನಿಂಗ್ ಮಷಿನ್, ಪಾರ್ಕಿಂಗ್ ಭದ್ರತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


