ಬೆಂಗಳೂರು: ಮತದಾರರ ಪಟ್ಟಿ ಪರಿಶೀಲಿಸಲು ವಿಶೇಷ ಅಧಿಕಾರಿಗಳ ನೇಮಕ!
ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ.

ಬೆಂಗಳೂರು: ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಅಧಿಕಾರಿಗಳನ್ನು ನೇಮಿಸಿದೆ.
ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆಗೆ ಡಾ.ಆರ್.ವಿಶಾಲ್, ಮಹದೇವಪುರಕ್ಕೆ ಅಜಯ್ ನಾಗಭೂಷಣ್ ಅವರನ್ನು ಮತದಾರರ ಪಟ್ಟಿ ಪರಿಶೀಲನೆಗೆ ವಿಶೇಷಾಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಸರು ಸೇರ್ಪಡೆ ಮತ್ತು ಅಳಿಸುವಿಕೆಯ ವಿವರಗಳನ್ನು ನೀಡುವಂತೆ ಸೂಚಿಸಲಾಗಿದ್ದು, ಈ ಕ್ಷೇತ್ರಗಳ ಪಟ್ಟಿಯ ವಿಶೇಷ ಪರಿಷ್ಕರಣೆಗಾಗಿ ಆಕ್ಷೇಪಣೆಗಳು ಮತ್ತು ಹಕ್ಕುಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 24 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಇದಕ್ಕೂ ಮುನ್ನ ಚುನಾವಣಾ ಆಯೋಗ ಬಿಬಿಎಂಪಿ ಆಡಳಿತದ ವಿಶೇಷ ಆಯುಕ್ತ ಎಸ್.ರಂಗಪ್ಪ ಮತ್ತು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


