ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ
ಇದೇ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ' ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

ಬೆಂಗಳೂರು: ಇದೇ 23 ರಿಂದ ಮೂರು ದಿನ ನಡೆಯಲಿರುವ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ' ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದ್ದು, ಕಿತ್ತೂರು ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಲಾಗಿದೆ. ಇದೇ ವರ್ಷ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು, ಇರುವ ಅರಮನೆಯನ್ನು ನೈಜವಾಗಿಟ್ಟು, ಅದರ ಪಕ್ಕದಲ್ಲೇ ಹೊಸ ಅರಮನೆ ನಿರ್ಮಿಸಲಾಗುವುದು ಎಂದರು.
ಮುಂದಿನ ತಿಂಗಳು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸಲಾಗುವುದು, ಕಿತ್ತೂರು ರಾಣಿ ಚೆನ್ನಮ್ಮನ ಬೈಲಹೊಂಗಲವನ್ನು ಅಭಿವೃದ್ಧಿಪಡಿಸಲಾಗುವುದು, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಬೆಳವಾಡಿ ಮಲ್ಲಮ್ಮ, ಓಬವ್ವ ಅವರನ್ನು ನೆನಪನಲ್ಲಿಡುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ದೇಶಕ್ಕೆ ಹೋರಾಟ ಮಾಡಿದವರ ಸ್ಮಾರಕವನ್ನು ಸರ್ಕಾರ ಹಂತ ಹಂತವಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


