ಭಾರತ್ ಜೋಡೋ ಯಾತ್ರೆ: ಮಂಡ್ಯದ ಜನರ ಹೃದಯ ಗೆಲ್ಲಲು ಸೋನಿಯಾ, ರಾಹುಲ್ ಗಾಂಧಿ ಪಾದಯಾತ್ರೆ
ಎರಡು ದಿನಗಳ ವಿರಾಮದ ಬಳಿಕ ಪಾಂಡವಪುರದ ಟಿ.ಎಸ್. ಛತ್ರದಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಕ್ಕಲಿಗ ಸಮುದಾಯದವರೇ ಅಧಿಕವಾಗಿರುವ ಜೆಡಿಎಸ್ ಭದ್ರಕೋಟೆಗೆ ಪ್ರವೇಶಿಸುತ್ತಿದ್ದಂತೆಯೇ ಕಾಂಗ್ರೆಸ್‌ಗೆ ಭರ್ಜರಿ ಪ್ರತಿಕ್ರಿಯೆ ಕಾದಿತ್ತು.

ನಾಗಮಂಗಲ: ಎರಡು ದಿನಗಳ ವಿರಾಮದ ಬಳಿಕ ಪಾಂಡವಪುರದ ಟಿ.ಎಸ್. ಛತ್ರದಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಕ್ಕಲಿಗ ಸಮುದಾಯದವರೇ ಅಧಿಕವಾಗಿರುವ ಜೆಡಿಎಸ್ ಭದ್ರಕೋಟೆಗೆ ಪ್ರವೇಶಿಸುತ್ತಿದ್ದಂತೆಯೇ ಕಾಂಗ್ರೆಸ್‌ಗೆ ಭರ್ಜರಿ ಪ್ರತಿಕ್ರಿಯೆ ಕಾದಿತ್ತು. ಪುತ್ರ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ಜೊತೆಗೆ, ಹಿರಿಯ ನಾಯಕರು, ರೈತರು, ಕಾರ್ಮಿಕ ವರ್ಗಗಳು, ಮಹಿಳೆಯರು ಮತ್ತು ಸಮಾಜದ ಎಲ್ಲಾ ವರ್ಗಗಳ ಜನರು ಯಾತ್ರೆಯಲ್ಲಿ ಭಾಗವಹಿಸುವಿಕೆಯನ್ನು ಹೆಚ್ಚಿಸಿದರು.
ಪಕ್ಷದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್ ಮತ್ತು ಇತರರು ಸೋನಿಯಾ ಅವರೊಂದಿಗೆ ಹೆಜ್ಜೆ ಹಾಕಿದರು. ಸೋನಿಯಾ ತಮ್ಮ ವಯಸ್ಸು ಮತ್ತು ಅನಾರೋಗ್ಯದ ಪರಿಸ್ಥಿತಿಯನ್ನು ಲೆಕ್ಕಿಸದೆ, 10 ಕಿ.ಮೀ.ಗೂ ಹೆಚ್ಚು ದೂರ ಶಕ್ತಿಯುತವಾಗಿ ಮೆರವಣಿಗೆ ನಡೆಸಿದರು. ಈ ಮೂಲಕ ಆ ಪ್ರದೇಶದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದರು.
ಪಾಂಡವಪುರದ ಬೆಳ್ಳಾಲೆಯಲ್ಲಿ ಆರಂಭವಾದ ಯಾತ್ರೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಸುಮಾರು 8.5 ಕಿ.ಮೀ.ಗೂ ಹೆಚ್ಚು ದೂರ ನಡೆದು ಕರದಾಯ ಕೆರೆಯನ್ನು ತಲುಪಿದರು. ಯಾತ್ರೆಯಲ್ಲಿ ಭಾಗವಹಿಸಿದ್ದವರಿಗೆ ಅಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೆರವಣಿಗೆ ಪುನರಾರಂಭವಾದಾಗ, ಸಭೆ ನಡೆಸಲು ಭ್ರಮದೇವರಹಳ್ಳಿ ಗ್ರಾಮಕ್ಕೆ ತಲುಪಲು ಅವರು 9 ಕಿ.ಮೀ. ಕ್ರಮಿಸಿದರು.
ಈಮಧ್ಯೆ, ರಾಹುಲ್ ಗಾಂಧಿ ಅವರು ರೈತ ಸಮುದಾಯ ಮತ್ತು ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳೊಂದಿಗೆ ಸಂವಾದ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ರೈತರಿಗೆ ಅನುಕೂಲವಾಗುವ ದೀರ್ಘಕಾಲೀನ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಹೊರತರಲಿದೆ ಎಂದು ಭರವಸೆ ನೀಡಿದರು.

ತಾಯಿ-ಮಗ ಒಟ್ಟಾಗಿ ಪಾದಯಾತ್ರೆ ನಡೆಸಿ ಜನಮನ ಗೆದ್ದಿದ್ದು, ಗ್ರಾಮಸ್ಥರಿಂದ ಪ್ರಶಂಸೆ ವ್ಯಕ್ತವಾಗಿದೆ. ಮುಂಬರುವ ಚುನಾವಣೆಯಲ್ಲಿ ಮತದಾರರು ಮಂಡ್ಯದಲ್ಲಿ ಪಕ್ಷದ ಭವಿಷ್ಯಕ್ಕೆ ಪುಷ್ಟಿ ನೀಡಬಹುದು ಎನ್ನಲಾಗಿದೆ.
150 ದಿನಗಳ ಪಾದಯಾತ್ರೆಯನ್ನು ನೆರೆಯ ತಮಿಳುನಾಡಿನ ಕನ್ಯಾಕುಮಾರಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭಿಸಲಾಯಿತು ಮತ್ತು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಈ ಯಾತ್ರೆ ಒಳಗೊಂಡಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ 3,570 ಕಿಮೀ ಪಾದಯಾತ್ರೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


