ವಿಜಯಪುರದಲ್ಲಿ ಭೀಕರ ಅಪಘಾತ: ಕೆಎಸ್ಆರ್ ಟಿಸಿ ಬಸ್-ಕಾರು ಢಿಕ್ಕಿ, ಇಬ್ಬರು ಸಾವು!
ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಜಯಪುರ: ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಈ ಘಟನೆ ನಡೆದಿದ್ದು, ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಹುನಗುಂದ ತಾಲೂಕಿನ ಧನ್ನೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಹಾಜಿಸಾಬ್ ಬಾಗವಾನ್(50), ಪರಶುರಾಮ ಕಟ್ಟಿ(45) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಸವಾರ ರಾಜು ಚವ್ಹಾಣ್ (45) ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಯಾ ಕಾರ್ವೊಂದು ಮುದ್ದೇಬಿಹಾಳದಿಂದ ಇಳಕಲ್ ಕಡೆ ಬರುತ್ತಿತ್ತು. ಈ ವೇಳೆ ಕಾರು ಮೊದಲು ಫೋರ್ಡ್ ಎಂಡವರ್ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಇಳಕಲ್ನಿಂದ ಮುದ್ದೇಬಿಹಾಳ ಕಡೆ ಹೊರಟಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮತ್ತು ಬಸ್ ಮುಂಭಾಗ ನಜ್ಜುಗುಜ್ಜಾಗಿದೆ.
ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


