ಬೆಂಗಳೂರು: ಹುಟ್ಟುಹಬ್ಬದ ದಿನವೇ ಬೈಕ್ ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ, ಹಿಂಬದಿ ಸವಾರ ಸಾವು
ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದ ಯುವಕ ಬೈಕ್ ನಲ್ಲಿ ಹೋಗುತ್ತಿದ್ದಾಗ ಜಕ್ಕೂರು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ 20 ವರ್ಷದ ಸನಾ ಸಾಹಿಬಾ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಯುವಕನ ಬಲಗೈ ತುಂಡಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ.

ಬೆಂಗಳೂರು: ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದ ಯುವಕ ಬೈಕ್ ನಲ್ಲಿ ಹೋಗುತ್ತಿದ್ದಾಗ ಜಕ್ಕೂರು ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ 20 ವರ್ಷದ ಸನಾ ಸಾಹಿಬಾ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಯುವಕನ ಬಲಗೈ ತುಂಡಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ.
ಯಲಹಂಕ ಸಂಚಾರ ಪೊಲೀಸ್ ವ್ಯಾಪ್ತಿಯ ಕೆಐಎ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆ ಝೀೂಶಾನ್ ನ ಹುಟ್ಟುಹಬ್ಬವಾಗಿತ್ತು. ಇಬ್ಬರೂ ವಿಮಾನ ನಿಲ್ದಾಣದ ಕಡೆಗೆ ಸವಾರಿ ಮಾಡುತ್ತಿದ್ದರು, ಈ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸಾಹಿಬಾ ತಲೆಗೆ ಮಾರಣಾಂತಿಕ ಗಾಯಗಳಾಗಿದ್ದು, ಝೀಶಾನ್ ಅವರ ಬಲಗೈ ಭುಜದ ಮೇಲೆ ಗಂಭೀರ ಗಾಯಗಳಾಗಿದೆ.
ಸನಾ ಸಾಹಿಬಾ ಬೆನ್ಸನ್ ಟೌನ್ ಸಮೀಪದ ಚಿನ್ನಪ್ಪ ಗಾರ್ಡನ್ ನಿವಾಸಿಯಾಗಿದ್ದು, ಫ್ರೇಜರ್ ಟೌನ್ ನ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿಯಾಗಿದ್ದರು. ಅಪಘಾತವಾದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಸಾಹಿಬಾ ಮೃತಪಟ್ಟರು. ಝೀಶನ್ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಯಲಹಂಕ ಸಂಚಾರ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


