ಕರಾವಳಿ ಭಾಗದ ದೈವ ನರ್ತಕರಿಗೆ ಸರ್ಕಾರದಿಂದ 2 ಸಾವಿರ ರೂ. ಮಾಸಾಶನ: ಸಚಿವ ಸುನಿಲ್ ಕುಮಾರ್
ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ.

ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ.
ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಿನಿಮಾವನ್ನು ನೋಡಿದ ಅನೇಕರು ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಒಳ್ಳೆಯ ಯೋಜನೆಗಳನ್ನು ತರಬೇಕು, ಅವರಿಗಾಗಿ ಮಾಸಾಶನ ನೀಡಬೇಕು ಎಂದು ಹೇಳುತ್ತಿದ್ದರು.
ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತಾಡಬಾರದು. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿಕೆ ನಟ ಚೇತನ್ ಅಹಿಂಸ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: 'ಕಾಂತಾರ' ಬಗ್ಗೆ ಅಪಸ್ವರ ಎತ್ತುವವರಿಗೆ ನೋ ಕಮೆಂಟ್ಸ್, ಸಂಸ್ಕೃತಿ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ: ರಿಷಬ್ ಶೆಟ್ಟಿ
ನಟ ಚೇತನ್ ವಿರುದ್ಧ ಪೊಲೀಸ್ ದೂರು
ಭೂತಕೋಲ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದಿದ್ದ ನಟ ಚೇತನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ದೂರು ದಾಖಲಿಸಿದೆ. ನಟ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹ ವ್ಯಕ್ತಪಡಿಸಿದೆ.
ಕಾಂತಾರ ಸಿನಿಮಾ ಕರ್ನಾಟಕ ಗಡಿಯನ್ನು ದಾಟಿ ಹೊರರಾಜ್ಯ, ಹೊರದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


