ರಾಜ್ಯ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

ಸಚಿವ ವಿ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ
ಮಹಿಳೆಗೆ ಸೋಮಣ್ಣ ಕಪಾಳ ಮೋಕ್ಷ
Published On :

ಚಾಮರಾಜನಗರ: ಸಚಿವ ವಿ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು.

ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ತೆರಳಿದರು. ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.