ನಿಯಮ ಪಾಲಿಸದ ಅರೇಬಿಕ್ ಶಾಲೆಗಳ ವಿರುದ್ಧ ಸಮೀಕ್ಷೆ ನಡೆಸಲು ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ,ಸಿ.ನಾಗೇಶ್ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ,ಸಿ.ನಾಗೇಶ್ ಅವರು ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೆಚ್ಚಿನ ಅರೇಬಿಕ್ ಶಾಲೆಗಳು ರಾಜ್ಯ ಶಿಕ್ಷಣ ಇಲಾಖೆಯು ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡು ಬಂದಿದೆ. ಹೀಗಾಗಿ ಅದನ್ನು ಪರಿಶೀಲಿಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
‘ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
‘ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವವರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಇದಾಗಬಾರದು’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


