ರಾಜ್ಯ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
Published On :

ಹಾವೇರಿ: ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.

ಇಂದು ಹಾವೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಕನ್ನಡ ಸಾಹಿತ್ಯ ಸಮ್ಮೇಳದ ಲಾಂಛನ ಬಿಡುಗಡೆ ಮಾಡಿದರು.

ಈ ವೇಳೆ ಶಾಸಕರಾದ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವ ಸುನೀಲ್ ಕುಮಾರ್ ಅವರು, ಸಿಎಂ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಮೂರು ಲಕ್ಷ ಜನರು ಬರುವ ನಿರೀಕ್ಷೆಯಿದೆ. ನಗರದಲ್ಲಿ ಕನಿಷ್ಠ 25 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ‘ಕನಕ–ಷರೀಫ–ಸರ್ವಜ್ಞ’ ಹೆಸರಿನ ಪ್ರಧಾನ ವೇದಿಕೆ ಹಾಗೂ ‘ಪಾಪು–ಚಂಪಾ’ ಮತ್ತು ‘ಹೊಸಮನಿ ಸಿದ್ದಪ್ಪ–ಮಹದೇವ ಬಣಕಾರ’ ಹೆಸರಿನ ಎರಡು ಉಪ ವೇದಿಕೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.