ರಾಜ್ಯ

ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ...

ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನ
ಪರಮಶಿವಯ್ಯ
Published On :

ಚಿತ್ರದುರ್ಗ: ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಅವರನ್ನು ಪೊಲೀಸರು ಕೊನೆಗೂ ಶನಿವಾರ ಬಂಧಿಸಿದ್ದಾರೆ.

ಪರಮಶಿವಯ್ಯ ಅವರನ್ನು ಇಂದು ಬಂಧಿಸಲಾಗಿದ್ದು, ತನಿಖಾ ತಂಡ ಡಿವೈಎಸ್ ಪಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ನಡೆಸಿತು. ಬಳಿಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿತು.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸಿದ್ದಾರೆ. ನಿನ್ನೆಯಷ್ಟೇ ಮುರುಘಾ ಶ್ರೀಗಳ ವಿರುದ್ಧ 694 ಪುಟಗಳ ಆರೋಪಪಟ್ಟಿಯನ್ನುಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.