ರಾಜ್ಯ

ಮುರುಘಾ ಶ್ರೀಗಳ ಬಂಧನದಲ್ಲಿ ವಿಳಂಬವಾಗಿಲ್ಲ, ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಮುರುಘಾ ಮಠದ ಶ್ರೀಗಳ ಬಂಧನವಾಗಿದೆ, ತನಿಖೆಯಲ್ಲಿ ವಿಳಂಬವಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಮುರುಘಾ ಶ್ರೀಗಳ ಬಂಧನದಲ್ಲಿ ವಿಳಂಬವಾಗಿಲ್ಲ, ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಮುರುಘಾ ಸ್ವಾಮೀಜಿ
Published On :

ಶಿವಮೊಗ್ಗ: ಮುರುಘಾ ಮಠದ ಶ್ರೀಗಳ ಬಂಧನವಾಗಿದೆ, ತನಿಖೆಯಲ್ಲಿ ವಿಳಂಬವಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಕಾನೂನು ರೀತಿಯಲ್ಲಿ ಕೇಸಿನ ತನಿಖೆ ನಡೆಯುತ್ತದೆ. ಮಠ ಮತ್ತು ಚಿತ್ರದುರ್ಗದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದರು.

ಪೋಕ್ಸೋ ಕಾಯ್ದೆ ಪ್ರಕಾರ ಯಾರೆಲ್ಲರನ್ನು ಬಂಧಿಸಬೇಕೋ, ಯಾವ ರೀತಿ ತನಿಖೆಯಾಗಬೇಕೋ ಅದೆಲ್ಲವೂ ಕೂಡ ಕಾನೂನುಬದ್ಧವಾಗಿ ನಡೆಯುತ್ತದೆ. ಚಿತ್ರದುರ್ಗ ಡಿವೈಎಸ್ಪಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಿದ್ದಾರೆ, ಯಾರ ಹಸ್ತಕ್ಷೇಪವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.