ರಾಜ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಜೀವ ಬೆದರಿಕೆ, ದೂರು ದಾಖಲು

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಜೀವ ಬೆದರಿಕೆ, ದೂರು ದಾಖಲು
ಬೆಳ್ಳಾರೆ ಠಾಣೆ ಬಳಿ ಜಮಾಯಿಸಿದ ಹಿಂದೂ ಪರ ಕಾರ್ಯಕರ್ತರು
Published On :

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯಲ್ಲಿ ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಸಂಘಟನೆಯೊಂದರ ಮುಖಂಡನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಾರೆ ಗ್ರಾಮದ ಪ್ರಶಾಂತ್ ಪೂಂಜ  ಶನಿವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಶಾಫ್ರಿದ್  ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಶಾಂತ್ ಪೂಂಜಾ  ಒತ್ತಾಯಿಸಿದ್ದಾರೆ.

ಪ್ರಶಾಂತ್ ಪೂಂಜಾ ದೂರು ನೀಡಲು ಬಂದಾಗ ಅವರೊಂದಿಗೆ ನೂರಾರು ಹಿಂದೂ ಕಾರ್ಯಕರ್ತರು ಠಾಣೆ ಬಳಿ ಜಮಾಯಿಸಿದ್ದರು ಎಂದು ಮೂಲಗಳು ತಿಳಿಸಿವೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.