ರಾಜ್ಯ

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟೇಲೇರಿದ ಬಿ.ಎಸ್ ಯಡಿಯೂರಪ್ಪ

ಲಂಚ ಸ್ವೀಕಾರ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್‌ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟೇಲೇರಿದ ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ
Published On :

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ 9 ಮಂದಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಬಿಎಸ್‍ವೈ, ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್ ಶ್ರೀ, ರಾಮಲಿಂಗಂ ಕನ್‍ಸ್ಟ್ರಕ್ಷನ್ ಕಂಪೆನಿಯ ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.