ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ
ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಬಾಗಲಕೋಟೆ: ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
ಸೀರೆ, ಕುಪ್ಪಸ, ಹಣ್ಣು, ಹೂವು ಕಾಯಿ ಸೇರಿ ನಾನಾ ಪೂಜೆ ಹಾಗೂ ಉಡಿ ತುಂಬುವ ಸಾಮಗ್ರಿಯುಳ್ಳ ಬಾಗಿನವನ್ನು ಕೃಷ್ಣೆಯ ಮಡಲಿಗೆ ಮುಖ್ಯಮಂತ್ರಿಗಳು ಸಮರ್ಪಿಸಿದರು.
ಇಂದು ಬೆಳಗ್ಗೆ 10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿಗಳು ನೇರವಾಗಿ ಜಲಾಶಯಕ್ಕೆ ತೆರಳಿ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬಾಗಲಕೋಟೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


