ಕರ್ನಾಟಕ ಉಚ್ಛ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಮೊಹಮ್ಮದ್ ಗೌಸ್ ಶುಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರುಗಳು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಮೊಹಮ್ಮದ್ ಗೌಸ್ ಶುಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರುಗಳು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.
ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.
ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ ಸೇರಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


