ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ.

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ.
ಐದು ದಿನಗಳ ಲೋಕಾಯುಕ್ತ ಪೊಲೀಸ್ ಕಸ್ಟಡಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿ ಶಾಸಕರನ್ನು ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದೇ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳಿಗೆ ಸೂಚನೆ ನೀಡಿ, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.
ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಕಾರಣ ಪೊಲೀಸರು ಶಾಸಕ ಮಾಡಾಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


