ತಮಿಳುಗರ ಎತ್ತಿಕಟ್ಟಲು ಸಚಿವ ಯತ್ನ; ಮುನಿರತ್ನ ಬಂಧಿಸುವಂತೆ ಸರ್ಕಾರಕ್ಕೆ ಡಿ.ಕೆ.ಸುರೇಶ್ ಆಗ್ರಹ
ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಆರ್‌ಆರ್‌ನಗರ ಕ್ಷೇತ್ರದಲ್ಲಿ ನೆಲೆಸಿರುವ ತಮಿಳುಗರನ್ನು ಕನ್ನಡಿಗರ ವಿರುದ್ಧ ಎತ್ತಿಕಟ್ಟಲು ಯತ್ನಿಸಿದ ಸಚಿವ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಬೇಕೆಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.
ದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯದ ವಾತಾವರಣ ನಿರ್ಮಾಣ ಮಾಡಿರುವ ಸಚಿವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಮುನಿರತ್ನ ತಮ್ಮ ರಾಜಕೀಯ ಲಾಭಕ್ಕಾಗಿ ಕನ್ನಡಿಗರು ಮತ್ತು ತಮಿಳರ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ದೂರು ನೀಡಲಿದೆ ಎಂದು ಹೇಳಿದರು.
ತಮ್ಮ ಪಕ್ಷದ ಕೇಂದ್ರ ನಾಯಕರ ಭೇಟಿಯಲ್ಲಿ ಬಿಜೆಪಿ ನಾಯಕರು ಹಣ ಗಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಏಳು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂತಹ ಭೇಟಿ ಸಂದರ್ಭಗಳನ್ನು ಬಳಸಿಕೊಂಡು ಸ್ಥಳೀಯ ನಾಯಕರು ಹಣ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು.
ಕೆಐಎಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 30 ಕೋಟಿ ರೂಪಾಯಿ ಖರ್ಚು ಮಾಡಿದೆ. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರದಿದ್ದರೂ ವಿಮಾನ ನಿಲ್ದಾಣ ರಸ್ತೆ ದುರಸ್ತಿ 8.50 ಕೋಟಿ ವೆಚ್ಚ ಮಾಡಲಾಗಿದೆ. ಪೆಂಡಾಲ್ ಹಾಕಲು ರೂ.12 ಕೋಟಿ, ಕುಡಿಯುವ ನೀರಿಗೆ 1 ಕೋಟಿ ಖರ್ಚು ಮಾಡಲಾಗಿದೆ, ಇತರೆ ಸ್ಥಳಗಳಿಂದ ಜನರನ್ನು ಕಾರ್ಯಕ್ರಮಕ್ಕೆ ಕರೆತರಲು ರೂ.6.5 ಕೋಟಿ ವೆಚ್ಚ ಮಾಡಿದ್ದಾರೆಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


