ವೀಕೆಂಡ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು
ವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಚಿಕ್ಕಬಳ್ಳಾಪುರ: ವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಒಟ್ಟು 6 ವಿದ್ಯಾರ್ಥಿಗಳು ಇಂದು ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಡ್ಯಾಂ ಟ್ರಿಪ್ ಗೆ ಹೋಗಿದ್ದು, ಈ ವೇಳೆ ಈಜಲು ನೀರಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮೃತರನ್ನು ಪೂಜಾ, ರಾಧಿಕಾ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಡಿ ಫಾರ್ಮಸಿ ಓದುತ್ತಿದ್ದ ಈ ವಿದ್ಯಾರ್ಥಿಗಳು ಬೈಕ್‌ನಲ್ಲಿ ಶ್ರೀನಿವಾಸ ಸಾಗರ ಡ್ಯಾಂ ತೆರಳಿದ್ದು, ಮಧ್ಯಾಹ್ನದ ವೇಳೆ ಡ್ಯಾಮ್‌ನಲ್ಲಿ ಈಜಲು ಮುಂದಾಗಿದ್ದಾರೆ. ಈ ವೇಳೆ ಡ್ಯಾಮ್‌ನ ಒಳಗಿದ್ದ ಕಲ್ಲಿನ ಮೇಲೆ ನಿಂತುಕೊಂಡು ಒಬ್ಬರನ್ನೊಬ್ಬರು ಕೈ ಹಿಡಿದುಕೊಂಡು ಆಳವಿರುವ ಪ್ರದೇಶಕ್ಕೆ ಹೋಗಿದ್ದಾರೆ. ಆದರೆ, ಈ ವೇಳೆ ಒಬ್ಬರು ಕಾಲುಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಎಲ್ಲರೂ ಕೈ- ಕೈ ಹಿಡಿದುಕೊಂಡೇ ಸರಪಳಿ ರೀತಿಯಲ್ಲಿ ಮುಂದಾಗಿದ್ದಾರೆ. ಈ ವೇಳೆ ಮೊದಲು ಕಾಲು ಜಾರಿ ಬಿದ್ದ ವಿದ್ಯಾರ್ಥಿನಿಯ ಜೊತೆಗೆ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಉಳಿದಂತೆ ಇನ್ನು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


