ಚಿತ್ರದುರ್ಗ: ಕಾರು–ಲಾರಿ ಮುಖಾಮುಖಿ ಡಿಕ್ಕಿ, ಖ್ಯಾತ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಸಾವು
ಚಿತ್ರದುರ್ಗದಲ್ಲಿ ಕಾರು–ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಳ್ಳಕೆರೆ: ಚಿತ್ರದುರ್ಗದಲ್ಲಿ ಕಾರು–ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ರಂಗಭೂಮಿ ಹಾಗೂ ತೊಗಲು ಗೊಂಬೆಯಾಟದ ಹಿರಿಯ ಕಲಾವಿದ ಬೆಳಗಲ್ ವೀರಣ್ಣ ಸಾವಿಗೀಡಾಗಿದ್ದಾರೆ. ಬಳ್ಳಾರಿ ಮೂಲದವರಾದ ವೀರಣ್ಣ ಅವರು ಪುತ್ರ ಹನುಮಂತ ಅವರೊಂದಿಗೆ ಬೆಳಿಗ್ಗೆ ಬೆಂಗಳೂರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವೀರಣ್ಣ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮಾರ್ಗ ಮಧ್ಯೆ ಸಾವಿಗೀಡಾಗಿದ್ದರು. ವೀರಣ್ಣ ಅವರ ಜೊತೆಗಿದ್ದ ಪುತ್ರ ಹನುಮಂತ ಅವರು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಳಗಲ್ ವೀರಣ್ಣ (91) ಅವರು ಹಂಪಿ ಕನ್ನಡ ವಿವಿಯ ನಾಡೋಜ, ಕರ್ನಾಟಕ ರಾಜ್ಯೋತ್ಸವ, ಜಾನಪದ ಅಕಾಡೆಮಿ ಮತ್ತಿತರ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಜತೆಗೆ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತೊಗಲು ಗೊಂಬೆಯಾಟವನ್ನು ದೇಶ- ವಿದೇಶಗಳಲ್ಲಿ ಪ್ರಖ್ಯಾತಪಡಿಸಿದ್ದ ವೀರಣ್ಞ, ಖ್ಯಾತ ಸಂಗೀತ ಕಲಾವಿದ ಪಂಡಿತ್ ವೆಂಕಟೇಶಕುಮಾರ್ ಅವರ ಮಾವ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


