ರಾಜ್ಯ

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಸಿಎಂ ಬೊಮ್ಮಾಯಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದರು.

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Published On :

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಖಚಿತತೆಯ ಮೇರೆಗೆ ಕೆಲ ನಾಯಕರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಪುನರುಚ್ಚರಿಸಿದರು.

ಇದೇ ವೇಳೆ, ಬೇರೆ ಪಕ್ಷಗಳಿಂದ ಇನ್ನೂ ಹಲವು ನಾಯಕರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗೆ ಉತ್ತರಿಸಿದ ಸಿಎಂ, ಯಾರೂ ಬಿಜೆಪಿ ತೊರೆಯುವುದಿಲ್ಲ, ಕೆಪಿಸಿಸಿ ಅಧ್ಯಕ್ಷರು ಕೆಲವರ ಹೆಸರುಗಳನ್ನು ಅನಗತ್ಯವಾಗಿ ಹೇಳುತ್ತಿದ್ದಾರೆ, ಬಿಜೆಪಿ ಶಾಸಕರನ್ನು ಸಂಪರ್ಕಿಸಲು ಕಾಂಗ್ರೆಸ್ ನಾಯಕ ಪ್ರಯತ್ನಿಸಿದ್ದು, ಅವರಿಗೆ ಟಿಕೆಟ್ ನೀಡುತ್ತಿದ್ದಾರೆಂದು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಗೆಲ್ಲಲಾಗದ ಸ್ಥಾನಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಒಂದೆಡೆ ಶಿವಕುಮಾರ್ ಸಿಎಂ ಆಗಲು ಆಶೀರ್ವಾದ ಪಡೆಯುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದಾರೆ. ಆದರೆ, ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.