ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಸಂಸದ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ನವದೆಹಲಿ: ಸಂಸದ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಭೇಟಿ ವೇಳೆ ದೇವೇಗೌಡ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ಜೀವನಾಗಾಥೆಯ ಪುಸ್ತಕವನ್ನು ನೀಡಿದರು.
"Furrows in a field : The unexplored life of H.D. Deve Gowda" ಪುಸ್ತಕದ ಪ್ರತಿಯನ್ನು ಓಂ ಬಿರ್ಲಾ ಅವರಿಗೆ ದೇವೇಗೌಡ ಅವರು ನೀಡಿದರು. ಬಳಿಕ ಇಬ್ಬರೂ ನಾಯಕರು ಸಮಕಾಲೀನ ರಾಜಕೀಯ ಮತ್ತು ಸಾಮಾಜಿಕ ಪ್ರಸ್ತುತತೆಯ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ನಂತರ ದೇವೇಗೌಡ ಅವರು, ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.
ಇದನ್ನೂ ಓದಿ: ದೇವೇಗೌಡರು ಕಟ್ಟಿದ ಪಕ್ಷಕ್ಕೆ ಅಥವಾ ಕುಟುಂಬದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ: ಅನಿತಾ ಕುಮಾರಸ್ವಾಮಿ
ರಾಷ್ಟ್ರಪತಿಗಳ ಭೇಟಿ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ದೇವೇಗೌಡ ಅವರು, ವಿಚಾರಗಳನ್ನು ಉತ್ತಮ ರೀತಿಯಲ್ಲಿ ವಿನಿಮಯ ಮಾಡಿಕೊಂಡೆವು. ಅವರ ಸಹಾನುಭೂತಿ ನನ್ನನ್ನು ಪ್ರೇರೇಪಿಸಿತು. ಭಾರತದ ಪ್ರಗತಿಗಾಗಿ ಅವರ ದೃಷ್ಟಿಕೋನವನ್ನು ನಾನು ಬಹಳ ಪ್ರಶಂಸಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


