ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲು
ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಗೆಜೆಟೆಡ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಜನರು ನಡುವೆ ದ್ವೇಷವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ “ಕ್ರೈಸ್ತರು ಈ ಕ್ಷಣದಲ್ಲಿಯೂ ಜನರನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಕೊಳೆಗೇರಿಗಳಲ್ಲಿ ಮತಾಂತರ ಗರಿಷ್ಠವಾಗಿದೆ. 1,400 ಜನರಿರುವ ಇಂತಹ ಸ್ಥಳಗಳಲ್ಲಿ 400 ಮಂದಿ ಮತಾಂತರಗೊಂಡಿದ್ದಾರೆ. ಕ್ರಿಶ್ಚಿಯನ್ನರು ಮತಾಂತರ ಮಾಡಲು ಬಂದರೆ ಅವರನ್ನು ಹೊರಹಾಕಿ ಇಲ್ಲವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಂದು ಮುನಿರತ್ನ ಹೇಳಿದ್ದರು.
ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 117 (ಅಪರಾಧಕ್ಕೆ ಪ್ರಚೋದನೆ), 153A (ವಿವಿಧ ಗುಂಪುಗಳು ಅಥವಾ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು)ಅಡಿಯಲ್ಲಿ ರಾಜರಾಜೇಶ್ವರಿನಗರ ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


